Download Now Banner

This browser does not support the video element.

ತುಮಕೂರು: ನಗರದಲ್ಲಿ ನಾಗರಕಟ್ಟೆ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ : ಶಾಸಕ ಯತ್ನಾಳ್ ಭಾಗಿ

Tumakuru, Tumakuru | Sep 13, 2025
ತುಮಕೂರಿನ ನಾಗರಕಟ್ಟೆ ಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಭಾಗವಹಿಸಿದ್ದರು. ಶನಿವಾರ ಸಂಜೆ 4.30 ರ ಸಮಯದಲ್ಲಿ ಮೆರವಣಿಗೆಯಲ್ಲಿ ಯತ್ನಾಳ್ ಪಾಲ್ಗೊಂಡಿದ್ದರು.. ನಗರದ ಟೌನ್ ಹಾಲ್ ವೃತ್ತದಿಂದ ಹೊರಟ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ನಿರೀಕ್ಷೆ ಮೀರಿ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ಸಾರ್ವಜನಿಕರು , ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಸಕ ಬಸನಗೌಡ ಯತ್ನಾಳ್ ಜೊತೆಯಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಟಿ. ಬಿ. ಶೇಖರ್, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಚಿದಾನಂದ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
Read More News
T & CPrivacy PolicyContact Us