ಶ್ರೀಕ್ಷೇತ್ರ ಧರ್ಮಸ್ಥಳ ಹೆಸರಿಗೆ ಕಳಂಕ ತರುವ ಹುನ್ನಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಗ್ಗೆ ೧೧ ಗಂಟೆಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುವವರನ್ನು ಬಂಧಿಸಿ ಎಂದು ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು.