Download Now Banner

This browser does not support the video element.

ಬೆಂಗಳೂರು ಉತ್ತರ: ಸಾಹಸಸಿಂಹ ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ಘೋಷಣೆ

Bengaluru North, Bengaluru Urban | Sep 11, 2025
ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಟ ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಪತ್ನಿ ಭಾರತಿ ಮತ್ತು ಅಳಿಯ ಅನಿರುದ್ಧ್‌, ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಈ ಸಂಬಂಧ ವಿಷ್ಣು ಅಭಿಮಾನಿಗಳು ಸಹ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಸಿನಿಮಾ ರಂಗಕ್ಕೆ ವಿಷ್ಣು ಅವರ ಕೊಡುಗೆ ಹಾಗೂ ಅಭಿಮಾನಿಗಳ ಒತ್ತಾಸೆಯನ್ನು ಪರಿಗಣಿಸಿ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಿದೆ.
Read More News
T & CPrivacy PolicyContact Us