ಮಳವಳ್ಳಿ : ಮದ್ದೂರಿನಲ್ಲಿ ಗಣೇಶ ಮೂರ್ತಿಯ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿರುವ ಅನ್ಯ ಕೋಮಿನ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ, ಘಟನೆಯನ್ನು ವಿರೋಧಿಸಿ ಶಾಂತಿಯುತ ಪ್ರತಿಭ ಟನೆ ನಡೆಸುತ್ತಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ಲಾಠಿ ಚಾಜ್೯ ಮಾಡಿರುವ ಪೊಲೀಸರ ಕ್ರಮವನ್ನು ವಿರೋ ಧಿಸಿ ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿ ಮುಂದೆ ಬಿಜೆಪಿ ಮುಖಂಡರು ಹಾಗೂ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು. ಮಂಗಳವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಬಿಜೆಪಿ ಮಳವಳ್ಳಿ ಮಂಡಲ ವತಿಯಿಂದ ಆಯೋಜಿ ಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂ ಡಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.