ಪಿಪಿಪಿ ಮಾದರಿ ಕೈಬಿಟ್ಟು ಸರಕಾರಿ ಸ್ವಾಮ್ಯದ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ಹೋರಾಟ ಸಮಿತಿಯ ಸದಸ್ಯರು ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲೆಯ ಎಲ್ಲಾ ಶಾಸಕರಿಗೂ ಈ ಬಗ್ಗೆ ಮನವಿ ಸಲ್ಲಿಸಲು ಸಮಿತಿಯು ನಿರ್ಧರಿಸಿದ್ದಾರೆ. ಯಾವುದೇ ಕಾರಣಕ್ಕೂ ಪಿಪಿಪಿ ಮಾದರಿ ಬೇಡಾ ಎಂದರು. ಈ ಸಂದರ್ಭದಲ್ಲಿ ಬಿ ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಫಯಾಜ್ ಕಲಾದಗಿ ಇದ್ದರು