ಶಿರಸಿ ಪಟ್ಟಣದ ವಿವಿಧ ಗ್ರಾಮ ಪಂಚಾಯತ್ಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಮಂಗಳವಾರ ಸಂಜೆ 4ಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪುನಶ್ಚೇತನಗೊಳಿಸಲಾದ ಕಲಗಾರ್ ಗ್ರಾಮದ ಕಲ್ಯಾಣಿ ಕಾಮಗಾರಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇನ್ನೂ ಕಲಗಾರ್, ಕಡಕೋಡ ಹಾಗೂ ವಿವಿಧ ಗ್ರಾಮಗಳಿಗೆ ತೆರಳಿ ವಿವಿಧ ಕಾಮಗಾರಿಗಳನ್ನು ಸಿಇಒ ಅವರು ಪರಿಶೀಲನೆ ನಡೆಸಿದರು. ಈ ವೇಳೆ ಅಂಗನವಾಡಿ ಕೇಂದ್ರ ಹಾಗೂ ಶಾಲಾ ಕೊಠಡಿಗಳಲ್ಲಿ ಮಕ್ಕಳೊಂದಿಗೆ ಸಂವಹನ ನಡೆಸಿದರು.