ಉತ್ತರ ಕನ್ನಡ ಜಿಲ್ಲೆಯಲ್ಲಿ 2025 ನೇ ಸಾಲಿನ ಇಲ್ಲಿಯವರೆಗೆ ಎನ್.ಡಿ.ಪಿ.ಎಸ್ ಕಾಯ್ದೆ (ಗಾಂಜಾ) ಅಡಿಯಲ್ಲಿ 136 ಪ್ರಕರಣಗಳನ್ನು ದಾಖಲಿಸಿದ್ದು, ಪ್ರಕರಣದಲ್ಲಿ ಭಾಗಿಯಾದ 175 ಮಂದಿ ಆರೋಪಿತರ ವಿರುದ್ದ ಸೂಕ್ತ ಕಾನೂನು ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್. ಎಂ. ಪ್ರಕಟಣೆ ಮೂಲಕ ಸೋಮವಾರ ಸಂಜೆ 6ಕ್ಕೆ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ನಿರಂತರವಾಗಿ ಸಾರ್ವಜನಿಕರಿಗೆ, ಶಾಲಾ ಕಾಲೇಜುಗಳಿಗೆ, ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಕಮಿಟಿಯ ಜೊತೆ ಸಮನ್ವಯ ಸಭೆ ನಡೆಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ