ಹನೂರು:ಹನೂರು ತಾಲೂಕಿನಲ್ಲಿ ನಡೆದ ಗಣೇಶ ಚತುರ್ಥಿ ಹಬ್ಬದ ಆಚರಣೆ ಶ್ರದ್ಧೆ ಮತ್ತು ಭಕ್ತಿಯಿಂದ ನೆರವೇರಿದ ಹಿನ್ನೆಲೆಯಲ್ಲಿ, ಶುಕ್ರವಾರ ಒಂದೇ ದಿನ 75 ಕಡೆಗಳಲ್ಲಿ ಗಣಪತಿ ವಿಸರ್ಜನೆ ಕಾರ್ಯಕ್ರಮ ಶಾಂತಿಯುತವಾಗಿ ಜರುಗಿತು. ತಾಲೂಕಿನಲ್ಲಿ ಈ ವರ್ಷದ ಗಣೇಶೋತ್ಸವ ಸಂದರ್ಭದಲ್ಲಿ ಒಟ್ಟಾರೆ 200 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗಿತ್ತು. ಈ ಪೈಕಿ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಗಳಲ್ಲಿ – 104 ಕಡೆ ರಾಮಪುರ ಠಾಣಾ ವ್ಯಾಪ್ತಿಯಲ್ಲಿ – 75 ಕಡೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ – 22 ಕಡೆ ಪ್ರತಿಷ್ಠಾಪನೆ ಮಾಡಲಾಗಿತ್ತುಹಬ್ಬದ ಭಾಗವಾಗಿ ಶುಕ್ರವಾರ, ಒಂದೆ ದಿನ75ಕಡೆ ಭಕ್ತರು ಮೆರವಣಿಗೆ ಮೂಲಕ ದೇವರನ್ನು ವಿಸರ್ಜಿಸಿಸದ್ದು, ಎಲ್ಲೆಡೆ ಶಿಸ್ತುಬದ್ಧವಾಗಿ ಕಾರ್ಯಕ್ರಮಗಳು ನಡೆದವು