ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಬುಧವಾರ ಮಧ್ಯಾಹ್ನ 2ಗಂಟೆ ಸುಮಾರಿಗೆ ವಿದ್ಯುತ್ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ಅಶೋಕ ಮನಗೂಳಿ ಸಭೆ ನಡೆಸಿದರು. ಸಿಂದಗಿ ತಾಲೂಕು ಹಾಗೂ ಆಲಮೇಲ ತಾಲೂಕುಗಳಲ್ಲಿ ವಿದ್ಯುತ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು ಇನ್ನೂ ರೈತರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕು ಮತ್ತು ಗ್ರಾಮಗಳಲ್ಲಿ ವಿದ್ಯುತ್ ವ್ಯೆತೆಯವಾಗದಂತೆ ವಿದ್ಯುತ್ ಪೂರೈಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. ಮಳೆಗಾಲ ಹಿನ್ನೆಲೆ ವಿದ್ಯುತ್ತಿನಿಂದ ಯಾರಿಗೂ ತೊಂದರೆಯಾಗದಂತೆ ಕಾರ್ಯನಿರ್ವಹಣೆ ಮಾಡಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯುತ್ ಇಲಾಖೆ ಅಧಿಕಾರಿಗಳು ಜನಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದರು.