ಹುಬ್ಬಳ್ಳಿಯಲ್ಲಿ ಪ್ರತಿಷ್ಠಿತ ಮಾಲ್ ಒಂದರಲ್ಲಿ ಮೇಲಿನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಕಿಡಿಗೇಡಿಗಳು ಸುಳ್ಳು ಸುದ್ದಿ ಹಬ್ಬಿಸಿದ ಘಟನೆ ನಡೆದಿದೆ. ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಇತ್ತೀಚಿಗೆ ಉದ್ಘಾಟನೆಗೊಂಡಿರುವ ಪ್ರತಿಷ್ಠಿತ ಮಾಲ್ ನಲ್ಲಿ ಇಬ್ಬರು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹಳೆಯ ವಿಡಿಯೋಗಳನ್ನು ವಾಟ್ಸಪ್ ಗಳಲ್ಲಿ ಶೇರ್ ಮಾಡುವ ಮೂಲಕ ಮಾಡುವ ಮೂಲಕ ಸುಳ್ಳು ಸುದ್ದಿಗಳನ್ನು ಹಬ್ಬಿಸಿದ ಘಟನೆ ನಡೆದಿದ್ದು. ಈ ಕುರಿತು ಮಾಲ್ ಆಡಳಿತ ಮಂಡಳಿ ಯಾವುದೇ ಘಟನೆ ನಡೆದಿಲ್ಲವೆಂದು ಸ್ಪಷ್ಟೀಕರಣ ನೀಡಿದೆ.