ಪ್ರತಿ ವರ್ಷ ಕೋಲಾರ ಜಿಲ್ಲೆಗೆ ಶಾಶ್ವತ ಕುಡಿಯುವ ನೀರಿಗಾಗಿ ಆಗ್ರಹಿಸಿ ಗಣೇಶ ಉತ್ಸವ ಮಾಡಿಕೊಂಡು ಬಂದಿದ್ದೇವೆ. ಈ ಬಾರಿ ಅದ್ದೂರಿಯಾಗಿ ಗಣಪತಿ ಹಬ್ಬವನ್ನು ಆಚರಿಸಿದ್ದು ಆಗಸ್ಟ್ 31 ರ ಮಧ್ಯಾಹ್ನ 12 ಗಂಟೆಗೆ ಗಣಪತಿ ವಿಸರ್ಜನೆ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಓಂ ಶಕ್ತಿ ಚಲಪತಿ ತಿಳಿಸಿದರು. ನಗರದ ತಮ್ಮ ಕಚೇರಿಯಲ್ಲಿ ಶನಿವಾರ ಮಾತನಾಡಿದ ಅವರು ಎಸ್ ಎನ್ ಆರ್ ಸರ್ಕಲ್ ನಲ್ಲಿ ಅಖಂಡ ಭಾರತ ವಿನಾಯಕ ಮಹಾ ಸಭಾ ವೇದಿಕೆಯಲ್ಲಿ ಬೃಹತ್ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ನಾಳೆ ಮಧ್ಯಾಹ್ನ ಸಾಮೂಹಿಕ ಗಣೇಶ ವಿಸರ್ಜನೆ ಹಮ್ಮಿಕೊಂಡಿದ್ದು ಬೃಹತ್ ಮೆರವಣಿಗೆಯಲ್ಲಿ ಜಿಲ್ಲೆಯ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಹಲವು ಮುಖಂಡರು ಭಾಗಿಯಾಗುವರು ಎಂದ್ರು