ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ರಾಜ್ಯಮಟ್ಟದ ಬಲಿಜಗ ಸಮಾಜದ ಸಮಾವೇಶವನ್ನು ಭಾನುವಾರ ಸಾಯಂಕಾಲ 6ಗಂಟೆ ಸುಮಾರಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಬಲಿಜಗ ಸಮಾಜವು ಆರ್ಥಿಕವಾಗಿ ಸಾಮಾಜಿಕವಾಗಿ ಸದೃಢರಾಗಲು ಸಮಾಜದ ಏಳಿಗೆಗೆ ಜನಪ್ರತಿನಿಧಿಗಳು ಬೆಂಬಲವಾಗಿರಬೇಕು ಎಂದು ಹೇಳಿದರು. ಇನ್ನು ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಚಿವ ಅಪ್ಪಾಜಿ ನಾಡಗೌಡ ಸೇರಿದಂತೆ ಸಮಾಜ ಮುಖಂಡರುಗಳು ಜನಪ್ರತಿನಿಧಿಗಳು ಭಾಗಿಯಾಗಿದ್ದರು.