ಚಿತ್ರದುರ್ಗ:-ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಗಳ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವುದರ ಕುರಿತಾಗಿ ಸಚಿವ ಡಿ. ಸುಧಾಕರ್ ಸಚಿವರೊಂದಿಗೆ ಚರ್ಚಿಸಿದರು. ಬೆಂಗಳೂರಿನ ವಿಕಾಸಸೌಧದಲ್ಲಿ ಮಂಗಳವಾರ ಮಧ್ಯಾಹ್ನ 2ಗಂಟೆಗೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು, ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಗಳ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವುದು ಹಾಗೂ ಹಾಲಿ ಕಟ್ಟಡವನ್ನು ವೈದ್ಯಕೀಯ ಕಾಲೇಜಿನ ಬಳಕೆಗೆ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.