ರಾಮನಗರ -- “ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ) ಯೋಜನೆಯಲ್ಲಿ ಪರಿಹಾರದ ಹಣ ಪಡೆಯದ ರೈತರಿಗೆ 50:50 ಅನುಪಾತದಲ್ಲಿ ಅಭಿವೃದ್ಧಿಪಡಿಸಿದ ಭೂಮಿ ನೀಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗರದಲ್ಲಿ ಗುರುವಾರ ಘೋಷಣೆ ಮಾಡಿದರು. ಗ್ರೇಟರ್ ಬೆಂಗಳೂರು ಸಮಗ್ರ ಉಪನಗರದ ಲೋಗೋ, ಕಿರುಹೊತ್ತಿಗೆ ಬಿಡುಗಡೆಗೊಳಿಸಿ ಮಾತನಾಡಿ ಅವರು ರೈತರ ಜೀವನೋಪಾಯಕ್ಕೆ ವಾರ್ಷಿಕ ಅನುದಾನ, ಆದಾಯ ತೆರಿಗೆ ವಿನಾಯಿತಿ, ಮುದ್ರಾಂಕ ಶುಲ್ಕ ವಿನಾಯಿತಿ, ಭೂರಹಿತರಿಗೆ ನಿವೇಶನ, ಭೂ ಸಂತ್ರಸ್ತ ರೈತರಿಗೆ ಆಯಾ ಜಮೀನಿನ ಮಾನದಂ