ಕಂಪ್ಲಿ ಪಟ್ಟಣದಲ್ಲಿ ಸೆಪ್ಟೆಂಬರ್ 6,ಶನಿವಾರ ರಾತ್ರಿ 10:30ಕ್ಕೆ 11ನೇ ದಿನದ ಗಣೇಶ ಮೂರ್ತಿಗಳ ಭವ್ಯ ವಿಸರ್ಜನಾ ಮೆರವಣಿಗೆ ಜರುಗಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ್ದು, ಭಕ್ತರು ಉತ್ಸಾಹಭರಿತವಾಗಿ ಪಾಲ್ಗೊಂಡರು.ಈ ಸಂದರ್ಭದಲ್ಲಿ ವಿವಿಧ ಕಲಾತಂಡಗಳು ತಮ್ಮ ಸಾಂಸ್ಕೃತಿಕ ಕಲೆಗಳನ್ನು ಪ್ರದರ್ಶಿಸಿ ಜನರ ಮನಸೆಳೆಯುವಂತೆ ಮಾಡಿದರು. ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿ ಡಿಜೆ ಸೌಂಡ್‌ಗೆ ಯುವಕರು ಕುಣಿದು ಕುಪ್ಪಳಿಸಿ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮವನ್ನು ಹೆಚ್ಚಿಸಿದರು.ಪೊಲೀಸರ ಭದ್ರತಾ ವ್ಯವಸ್ಥೆಯ ಮಧ್ಯೆ ಶಿಸ್ತಿನಿಂದ ವಿಸರ್ಜನೆ ಕಾರ್ಯಕ್ರಮ ನೆರವೇರಿತು