ಕಲಬುರಗಿ : ಮಂಡ್ಯದ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯಕೋಮಿನವರಿಂದ ದಾಳಿ ಖಂಡಿಸಿ ಕಲಬುರಗಿಯಲ್ಲಿ ರಾಮ್ ಸೇನಾ ಸಂಘಟನೆ ಪ್ರತಿಭಟನೆ ನಡೆಸಿದೆ.. ಸೆಪ್ಟೆಂಬರ್ 12 ರಂದು ಮಧ್ಯಾನ 12.30 ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.. ಇನ್ನೂ ಶಾಂತಿಯುತವಾಗಿ ನಡೆಯುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಅನ್ಯಕೋಮಿನ ಜಿಹಾದಿಗಳು ದಾಳಿ ನಡೆಸಿದ್ದು, ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲು ಕೃತ್ಯ ಎಸಗಿದ್ದಾರೆ.. ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ರಾಮ್ ಸೇನಾ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.