ಯಲ್ಲಾಪುರ: ಶಾಸಕ ಶಿವರಾಮ ಹೆಬ್ಬಾರ್ ಪಟ್ಟಣದ ಡಿ.ದೇವರಾಜ್ ಅರಸ ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆವತಿ ಆಯೋಜಿಸಿದ್ದ ವಿಶೇಷ ಪುನಶ್ಚೇತನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಡಿ.ದೇವರಾಜ್ ಅರಸ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.