ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಬಸವಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.ವಿವಿಧ ಇಲಾಖೆಗಳ ಸಹೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಸ್ಥಳೀಯ ಓಲೇಮಠದ ಶ್ರೀ ಆನಂದ ದೇವರು ಸೇರಿದಂತೆ ವೇದಿಕೆಯ ಮೇಲಿನ ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.