ಯಕ್ಸಂಬಾ ಪಟ್ಟಣದ ಕರ್ಲಹೊಂಡಲಿಂಗೇಶ್ವರ ದೇವಸ್ಥಾನ ಜಲಾವೃತ. ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆಯಾಗುತ್ತಿರುವ ಹಿನ್ನೆಲೆ ಶನಿವಾರ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ದೂಧಗಂಗಾ ನದಿಯು ಉಕ್ಕಿಹರಿಯುತ್ತಿದೆ.ಇದರಿಂದಾಗಿ ದೂಧಗಂಗಾ ನದಿಯ ನೀರು ಕರ್ಲಹೊಂಡಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿ ಜಲಾವೃತಗೊಂಡಿದೆ. ಇದರಿಂದಾಗಿ ದೇವರ ದರ್ಶನ ಬಂದಾಗಿದೆ. ಇದೇ ಸಂಧರ್ಭದಲ್ಲಿ ದೇವಸ್ಥಾನ ಸೇವಾ ಸಂಘದ ಸದಸ್ಯರು ಮಾತನಾಡಿ ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ದವಸಧ್ಯಾನಗಳು ಹಾಗೂ ಮಹತ್ವದ ಸಾಮಗ್ರಿಗಳು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ ಎಂದರು