ಮಕ್ಕಳಿಗೆ ಮನೆಯೇ ಮೊದಲ ಶಾಲೆ ಎನ್ನುವುದು ಹೋಗಿ ಮೊಬೈಲೇ ಮೊದಲ ಶಾಲೆಯಂತಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಸೆಪ್ಟೆಂಬರ್ 7ರಂದು ಪ್ರೆಸ್ ಕ್ಲಬ್ ಮತ್ತು ಬಾಲ ಭವನದ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದ್ದ "ಮಕ್ಕಳ ಜಾತ್ರೆ" ಸಾಂಸ್ಕೃತಿಕ ಹಬ್ಬಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕುಟುಂಬ, ಸಮಾಜ, ಸ್ನೇಹಿತರಿಂದ ಬೇರ್ಪಡಿಸುವ ವಿಡಿಯೊ ಗೇಮ್‌ಗಳು ಮಕ್ಕಳಲ್ಲಿ ಹಿಂಸಾತ್ಮಕ ಮನೋಭಾವ, ಕೋಪ, ಅಸಹನೆ ತರುಕುತ್ತವೆ. ಹೈಸ್ಕೂಲ್ ಮಟ್ಟದಲ್ಲೇ ರ್‍ಯಾಗಿಂಗ್ ಪಿಡುಗು ಹೆಚ್ಚಾಗುತ್ತಿರುವುದಕ್ಕೆ ಕಾರಣವೇನು ಎಂದು ನಾವು ಆಲೋಚಿಸಬೇಕಿದೆ" ಎಂದು ಅವರು ತಿಳಿಸಿದರು.