ಸೆಪ್ಟೆಂಬರ್ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದ ಸಿದ್ಧತೆ ಕುರಿತು ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್‌ಡಿಬಿ ಅಧ್ಯಕ್ಷ ಅಜಯಸಿಂಗ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉತ್ಸವವನ್ನು ಯಶಸ್ವಿಯಾಗಿ ನಡೆಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡಲಾಯಿತು. ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆದಿದ್ದು, ಜಿಲ್ಲಾ ಮಟ್ಟದ ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.