ಹೆಸ್ಕಾಂ, ಕುಮಟಾ ಉಪವಿಭಾಗದ 11ಕೆ.ವಿ ಇಂಡಸ್ಟ್ರಿಯಲ್ ಫೀಡರಿನ ಮಾರ್ಗದಲ್ಲಿ ಮತ್ತು ಗ್ರಾಮೀಣ ಶಾಖೆಯ 11ಕೆ.ವಿ ವಾಲ್ಗಳ್ಳಿ ಫೀಡರಿನ ಮಾರ್ಗದಲ್ಲಿ ತುರ್ತುನಿರ್ವಹಣಾ ಕಾರ್ಯವಿರುವುದರಿಂದ ಸೆ.10 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಹಾಗೂ 33ಕೆ.ವಿ ಗೋಕರ್ಣ ಉಪಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಇರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪಟ್ಟಣದಲ್ಲಿ ಶನಿವಾರ ಸಂಜೆ 5ಕ್ಕೆ ಹೆಸ್ಕಾಂ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಬಿಜ್ಜೂರು, ಗಂಗಾವಳಿ, ಓಂ ಬೀಚ್ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.