ವೀರರಾಣಿ ಕಿತ್ತೂರು ಚೆನ್ನಮ್ಮಳ ಮೂರ್ತಿ ಪ್ರತಿಷ್ಠಾಪನೆಗಾಗಿ ಮೀಸಲಿಟ್ಟಿರುವ 5 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕ ಹೋರಾಟ ಸಮಿತಿಯ ಅಧ್ಯಕ್ಷ ವಿಜಯ ಪವಾರ ಆಗ್ರಹಿಸಿದರು. ಅವರು ಸೋಮವಾರ ತಾಲೂಕಿನ ಬಳ್ಳಿಗೇರಿ ಗ್ರಾಮ ಪಂಚಾಯತ ಕಚೇರಿ ಮುಂದೆ ಕನ್ನಡಪರ ಸಂಘಟನೆಗಳ ಹೋರಾಟದ ನೇತೃತ್ವ ವಹಿಸಿ ಮಾತನಾಡಿದರು. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದಲ್ಲಿರುವ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಕನ್ನಡ ಪರ ಸಂಘಟನೆಗಳಿಂದ ಪ್ರತಿವರ್ಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗಡಿಭಾಗದಲ್ಲಿ ಕನ್ನಡತನವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಜತ್ತ -ಜಂಬೋಟ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಬಳ್ಳಿಗೇರಿ ಗ್ರಾಮದ ವೀರರಾಣಿ ಚೆನ್ನಮ್ಮ ವೃತ್ತದಲ್ಲ