ಕಲಬುರಗಿ : ಪ್ರಧಾನಿ ನರೇಂದ್ರ ಮೋದಿಯವರ 75 ನೇ ಜನ್ಮದಿನ ನಿಮ್ಮಿತ್ತ ಸೆಪ್ಟೆಂಬರ್ 17 ಕಲ್ಯಾಣ ಕರ್ನಾಟಕ ವಿಮೋಚನಾ ದಿನದಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ನಗರ ಬಿಜೆಪಿ ಅಧ್ಯಕ್ಷ ಚಂದು ಪಾಟೀಲ್ ಹೇಳಿದ್ದಾರೆ.. ಸೆ4 ರಂದು ಬೆಳಗ್ಗೆ 10 ಗಂಟೆಗೆ ನಗರದಲ್ಲಿ ಮಾತನಾಡಿದ ಅವರು, ಅಂದು ನಗರದ ಪಬ್ಲಿಕ್ ಗಾರ್ಡನ್‌ನ ವೀರಶೈವ ಕಲ್ಯಾಣ ಮಂಟಪದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಅಂತಾ ಹೇಳಿದರು. ಇನ್ನೂ ಉದ್ಯೋಗ ಮೇಳದಲ್ಲಿ ಪ್ರಮುಖ ಕಂಪನಿಗಳು ಭಾಗಿಯಾಗಲಿವೆ ಅಂತಾ ಚಂದು ಪಾಟೀಲ್ ಹೇಳಿದ್ದಾರೆ..