ಕೋಲಾರ ಜಿಲ್ಲೆಯ ಗಲ್ ಪೇಟೆ, ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳುವಾಗಿರುವ ಬಗ್ಗೆ ದೂರು ನೀಡಿದ್ದು ಅದರಂತೆ ಸಿ. ಇ. ಐ.ಅರ್ ಪೋರ್ಟೆಲ್ ಮೂಲಕ ಕಳುವಾಗಿದ್ದ ಮೊಬೈಲ್ಗಳನ್ನು ಪತ್ತೆ ಮಾಡಿ ಮಾಲೀಕರಿಗೆ ಹಸ್ತಾಂತರಿಸಲಾಯಿತು. ಪೋರ್ಟಲ್‌ನಲ್ಲಿ ದಾಖಲಾಗಿದ್ದ ಮೊಬೈಲ್ ಫೋನ್‌ಗಳ ಬಗ್ಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವಾರಸುದಾರರನ್ನು ಬರಮಾಡಿಕೊಂಡು, ಅವರವರ ಮೊಬೈಲ್ ಫೋನ್‌ಗಳನ್ನು ಹಸ್ತಾಂತರಿಸಲಾಯಿತು. ಮೊಬೈಲ್ ಫೋನ್‌ಗಳನ್ನು ಕಳೆದುಕೊಂಡಲ್ಲಿ ಕೂಡಲೇ ಸಿ.ಇ.ಐ.ಆರ್. ಪೋರ್ಟಲ್‌ನಲ್ಲಿ ದೂರನ್ನು ದಾಖಲಿಸುವಂತೆ ಕರೆ ನೀಡಿದರು.