ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಾವ್ರಾಡಿ ಗ್ರಾಮದ ಕಂಡ್ಲೂರಿನ ಭವಾನಿ ಸಂಜೀವ ಶೆಟ್ಟಿ ಸಭಾಭವನದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಜಂಬೂ ಸ್ಟಾರ್ ಸೆಕ್ಯುರಿಟಿ ಕುಂದಾಪುರ ಇವರ ಸಹಭಾಗಿತ್ವದಲ್ಲಿ " ದೃಷ್ಟಿ" ಯೋಜನೆಯನ್ನು ಎಸ್ ಪಿ ಹರಿರಾಮ್ ಶಂಕರ್ ಉದ್ಘಾಟಿಸಿದರು. 40 ಮನೆಗಳಿಗೊಂದು ಕ್ಲಸ್ಟರ್ ಮಾಡಿ ಒಬ್ಬ ಸೆಕ್ಯುರಿಟಿ ಗಾರ್ಡ್ ನೇಮಕ ಮಾಡುವಂತೆ ಸಭೆಯನ್ನು ಉದ್ದೇಶಿಸಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಾತನಾಡಿದರು.