ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಬಳಿಕ ಕೇಂದ್ರ ಗೃಹ ಸಚಿವರಿಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ರಾಜ್ಯ ರಾಜಪಾಲರಿಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಸಹ ಸಲ್ಲಿಸಲಾಯಿತು.