ಬಾಗೇಪಲ್ಲಿ ಪಟ್ಟಣದ ಕೋಚಿಮುಲ್ ಶಿಬಿರ ಕಚೇರಿಯಲ್ಲಿ ಬುಧವಾರ ಹಲವು ಸರಕಾರಿ ಶಾಲೆಗಳಿಗೆ ಲ್ಯಾಪ್ ಟಾಪ್ ಮತ್ತು ಕಂಪ್ಯೂಟರ್ ಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿಯವರು,ಈ ಭಾಗದಲ್ಲಿನ ಮಕ್ಕಳು ಶೈಕ್ಷಣಿಕವಾಗಿ ಮುಂದುವರೆಯಬೇಕು, ಅದಕ್ಕೆ ಅನುಕೂಲವಾಗುವಂತೆ ಚೀಮುಲ್ ಮಾಡುತ್ತಿರುವ ಕಾರ್ಯ ಮೆಚ್ಚುವಂತಾಗಿದೆ. ಹಾಗೇಯೆ ನಮ್ಮ ತಾಲೂಕಿನಲ್ಲಿ ವಸತಿ ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮವಾಗುತ್ತಿದೆ. ಆ ನಿಟ್ಟಿನಲ್ಲಿ ಗ್ರಾಮ ಪಂಚಾಯತಿಗೊಂದು ವಸತಿ ಶಾಲೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.