ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ದೊಡ್ಡ ಇತಿಹಾಸ ಇದೆ ಜೊತೆಗೆ EVM ಮಿಷನ್ ಬಗ್ಗೆ ಅನುಮಾನಗಳು ಬರುತ್ತಿರುವುದರಿಂದ ಸರ್ಕಾರ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ತೀರ್ಮಾನ ಮಾಡಿರುವುದು ಸೂಕ್ತವಾಗಿದೆ ಎಂದು ಶಾಸಕ ಕೆ.ವೈ ನಂಜೇಗೌಡ ಹೇಳಿದರು. ಕೋಚಿಮುಲ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮತಗಳ್ಳತನ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ರಾಹುಲ್ ಗಾಂಧಿ ದೇಶದ್ಯಾಂತ ಹೋರಾಟ ಮಾಡುತ್ತಿದ್ದಾರೆ. ಬಿಹಾರದಲ್ಲಿ ನಡೆಸುತ್ತಿರುವ ಮತಗಳ್ಳತನ ವಿರುದ್ಧದ ಆಂದೋಳನ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಗಿದ್ದು ಸಾವಿರಾರು ಜನರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮಾತ್ರ ಬ್ಯಾಲೆಟ್ ಪೇಪರ್ ಬಳಕೆ ಮಾಡುವುದಾಗಿ ಹೇಳಿದೆ ಎಂದ್ರು.