ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಯಾದಗಿರಿ ತಾಲೂಕಿನ ಯರಗೋಳ ಗ್ರಾಮದಲ್ಲಿರುವ ದೊಡ್ಡ ಕೆರೆಯು ಭಾರಿ ಪ್ರಮಾಣದಲ್ಲಿ ತುಂಬಿ ನೀರು ಮನೆಗಳಿಗೆ ನುಗ್ಗಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಗುರುವಾರ ಬೆಳಗ್ಗೆ ಗ್ರಾಮದಲ್ಲಿ ನೀರು ನುಗ್ಗುತ್ತಿದ್ದಂತೆ ಸಾರ್ವಜನಿಕರು ಆತಂಕಗೊಂಡು ನೋಡಲಾರಂಬಿಸಿದ್ದಾರೆ. ಅಲ್ಲದೆ ನೀರು ಹರಿಯುವ ಸ್ಥಳದಲ್ಲಿಯೇ ರಸ್ತೆ ಇರುವುದರಿಂದ ರಸ್ತೆ ದಾಟಲು ಸಾರ್ವಜನಿಕರು ಪರದಾಟ ನಡೆಸಿದ್ದಾರೆ. ಮನೆಗಳಿಗೆ ನೀರು ನುಗ್ಗಿದ್ದರಿಂದ ಹಾನಿ ಉಂಟಾಗಿದ್ದು ಸರಕಾರ ಪರಿಹಾರವನ್ನು ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.