ಹಾಸನ ಜಿಲ್ಲೆಯ ಐತಿಹಾಸಿಕ ಬೇಲೂರು ಪಟ್ಟಣದಲ್ಲಿ ಗಣೇಶನ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಹಿಂದುಪರ ಸಂಘಟನೆಗಳು ಸೆಪ್ಟೆಂಬರ್ 22ರಂದು ಪಟ್ಟಣ ಬಂದ್‌ಗೆ ಕರೆ ನೀಡಿದ್ದು, ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ.ಸೆಪ್ಟೆಂಬರ್ 20ರ ರಾತ್ರಿ, ಹಾಸನ ನಗರದ ವಿಜಯನಗರ ಬಡಾವಣೆಯ ಮಹಿಳೆ ಲೀಲಮ್ಮ ದೇವಾಲಯ ಪ್ರವೇಶಿಸಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ ಘಟನೆ ನಡೆದಿದೆ. ಪೊಲೀಸರು ತಕ್ಷಣವೇ ಆಕೆಯನ್ನು ವಶಕ್ಕೆ ಪಡೆದಿದ್ದು, ಆಕೆಯ ಮಾನಸಿಕ ಸ್ಥಿತಿ ಅಸ್ವಸ್ಥವಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೆ ಈ ಕೃತ್ಯದ ಹಿಂದೆ ಯಾರಾದರೂ ಪ್ರೇರೇಪಣೆ ನೀಡಿದರೆಂದು ಶಂಕೆ ವ್ಯಕ್ತವಾಗಿದ್ದು, ಸಂಘಟನೆಗಳು ಸಂಪೂರ್ಣ ತನಿಖೆ ನಡೆಸುವಂತೆ ಒತ್ತಾಯಿಸಿವೆ