ಚಿತ್ರದುರ್ಗದ ಡಿ ಏ ಆರ್ ಮೈಧಾನದಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ನ ಶಾಂತಿ ಸಭೆ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಾನುವಾರ ಮಧ್ಯಾಹ್ನ 12 ಗಂಟೆಗೆ ಈ ಒಂದು ಶಾಂತಿ ಸಭೆ ಹಮ್ಮಿಕೊಂಡಿದ್ದು ಅಪರ ಜಿಲ್ಲಾಧಿಕಾರಿ ಬಿ ಟಿ ಕುಮಾರಸ್ವಾಮಿ ಹಾಗೂ ಎಸ್ಪಿ ರಂಜಿತ್ ಕುಮಾರ್ ಬಂಡಾರು ಅವರು ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇನ್ನೂ ಹಿಂದು ಹಾಗೂ ಮುಸ್ಲಿಂ ಸಮುದಾಯದ ನೂರಾರು ಮುಖಂಡರು ಶಾಂತಿ ಸಭೆಯಲ್ಲಿ ಭಾಗವಹಿಸಿದ್ದು ಈದ್ ಮಿಲಾದ್ ಹಾಗೂ ಗಣೇಶ ಚತುರ್ಥಿ ಹಬ್ಬವನ್ನ ಶಾಂತ ರೀತಿಯಲ್ಲಿ ಅಡಚಣೆ ಮಾಡುವಂತೆ ಅಪರ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು