ಹಾಸನ: ಮಹಾನಗರ ಪಾಲಿಕೆಗೆ ಒಳಪಟ್ಟ ಬಳಿಕ ಅಧಿಕಾರಿಗಳು ಗ್ರಾಮವನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದ ಬೆನ್ನಲ್ಲೇ ಭುವನಹಳ್ಳಿ ಗ್ರಾಮಕ್ಕೆ ಶಾಸಕ ಸ್ವರೂಪ ಪ್ರಕಾಶ್ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ಅಧಿಕಾರಿಗಳು ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸಬೇಕು, ಗ್ರಾಮ ಮಹಾನಗರ ಪಾಲಿಕೆಗೆ ಒಳಪಟ್ಟರು ಅವರ ಕುಂದು ಕೊರತೆಗಳನ್ನು ಆಲಿಸಬೇಕಾಗಿರುವುದು ತಮ್ಮ ಜವಾಬ್ದಾರಿ ಆದುದರಿಂದ ಸ್ವೀಕರಿಸಿ ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಾವು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರ ಬಳಿ ಗ್ರಾಮಸ್ಥರ ಹಲವು ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದರು,