ಮುಂದಿನ ಐದು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಉಂಟಾಗಲಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ. ಆ ಪೈಕಿ ಸೆ.3 ಮತ್ತು ನಾಲ್ಕರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಜೋರು ಮಳೆಯಾಗಲಿದ್ದು, ನಂತರ ಮೂರು ದಿನಗಳ ಕಾಲ ಹಗುರ ಮಳೆಯಾಗಲಿದೆ ಎಂದು ರಾಯಚೂರು ಕೃಷಿ ವಿಶ್ವವಿದ್ಯಾಲಯದ ಜವಾಮಾನ ಶಾಸ್ತ್ರ ವಿಭಾಗ ಸೆ.3 ರ ಬುಧವಾರ ಮಧ್ಯಾಹ್ನ 12 ಗಂಟೆಗೆ ತಿಳಿಸಿದೆ.