ಬೈಕೊಂದಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಸವಾರ ತೀವ್ರವಾಗಿ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಗೇಟ್ ಬಳಿ ಬುಧವಾರ ಸಂಜೆ ನಡೆದಿದೆ. ಹಸಗೂಲಿ ಗ್ರಾಮದ ಶಂಕರ್ ಎಂಬವರು ಗಾಯಗೊಂಡವರು. ಮೈಸೂರು ಕಡೆಯಿಂದ ಬರುತ್ತಿದ್ದ ಕಾರು ಎದುರುನಿಂದ ಬಂದ ಶಂಕರ್ ಚಾಲನೆ ಮಾಡುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸದ್ಯ, ಸವಾರನಿಗೆ ತೀವ್ರಗಾಯಗಳಾಗಿದ್ದು ಬೇಗೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನೆ ಮಾಡಲಾಗಿದೆ. ಬೇಗೂರು ಪೊಲೀಸರು ಎರಡೂ ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.