ಅಂಗನವಾಡಿ ನೌಕರರ ಮುಖಚರೆ ಗುರುತಿಸುವ ಪದ್ಧತಿ ರದ್ದತಿಗೆ ಒತ್ತಾಯಿಸಿ ಕಪ್ಪು ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಸಂಘದ ಅಧ್ಯಕ್ಷೆ ಪುಷ್ಪ ಮಾತನಾಡಿ ಭಾರತದಲ್ಲಿ ಮಾನವ ಅಭಿವೃದ್ಧಿ ಸೂಚ್ಯಾಂಕಕ್ಕಿರುವ ಏಕೈಕ ಯೋಜನೆ ಐಸಿಡಿಎಸ್ ಮಾತ್ರ. ಈ ಯೋಜನೆಗೆ ಇಂದು 50 ವರ್ಷಗಳಾಗುತ್ತಾ ಬರುತ್ತಿದೆ. ಈ ಯೋಜನೆಯನ್ನು ಸರಳೀಕರಿಸಿ ಫಲಾನುಭವಿಗಳನ್ನು ಆಕರ್ಷಿಸಲು ಸರ್ಕಾರಗಳು ಕ್ರಮಗಳನ್ನು ರೂಪಿಸಬೇಕಿತ್ತು. ಆದರೆ ಅದರ ಬದಲಾಗಿ ಸಂಕೀರ್ಣಗೊಳಿಸಲಾಗುತ್ತಿದೆ. ಯಾವುದೇ ಸೌಲಭ್ಯಗಳನ್ನು ಕೊಡದೇ ಮುಖಚರ್ಯೆ ಗುರ್ತಿಸುವ ಕ್ರಮ (FRS) ನ್ನು ಅಳವಡಿಸಿದ್ದರಿಂದ ಕ್ಷೇತ್ರಮಟ್ಟದಲ್ಲಿ ಹಲವಾರು ಸಮಸ್ಯೆ ಆಗುತ್ತಿದೆ ಎಂದರು.