2025 ನೇ ಸಾಲಿನ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದೀಗ ಮೈಸೂರು ಜಿಲ್ಲಾಡಳಿತ ದಸರಾ ಟಿಕೆಟ್, ಗೋಲ್ಡ್ ಕಾರ್ಡ್ ಬಿಡುಗಡೆ ಮಾಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಹಾಗೂ ದಸರಾ ವಿಶೇಷಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು , ನಾಡಹಬ್ಬ ಮೈಸೂರು ದಸರಾ ಪ್ರಮುಖ ಆಕರ್ಷಣೆಯಾದ ಜಂಬೂವಾರಿ, ಪಂಜಿನ ಕವಾಯತು ಕಾರ್ಯಕ್ರಮಗಳ ವೀಕ್ಷಣೆಗೆ ಟಿಕೆಟ್ ಹಾಗೂ ಗೋಲ್ಡ್ ಕಾರ್ಡುಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅನುಕೂಲವಾಗಲೆಂದು ಟಿಕೆಟ್ ಮತ್ತು ಗೋಲ್ಡ್ ಕಾರ್ಡುಗಳನ್ನು ಮಾರಾಟಕ್ಕೆ ಬಿಡುಗಡೆಗೊಳಿಸಲಾಗಿರುತ್ತದೆ. ಸಾರ್ವಜನಿಕರಿಗೆ ದಸರಾ ಗೋಲ್ಡ ಕಾರ್ಡ್ ಮತ್ತು ಟಿಕೆಟ್‌ಗಳು ಇಂದು ಮಧ್ಯಾಹ್ನ ಬಿಡುಗಡೆಗೊಳಿಸಿದ್ದಾರೆ.