ಯಾದಗಿರಿ ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸುಂಬೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯ ನಡೆಸಿದರು. ಸಭೆಯಲ್ಲಿ ಜಿಲ್ಲಾ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮರಿಯಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಶಿರಸಗಿ, ಡಿವೈಎಸ್ಪಿ ಜಾವಿದ್ ಇನಾಂದಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲ ಸುರಪುರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ದಿನೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.