ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಕ್ಷೇತ್ರದ ತ್ರೈಮಾಸಿಕ ಪ್ರಗತಿ ಪರಿಶೀಲನ ಸಭೆಯನ್ನು ತರೀಕೆರೆ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಯಿತು. ಈ ಸಭೆಗೆ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದು ಅಧಿಕಾರಿಗಳು ಸರ್ಕಾರ ಮತ್ತು ಶಾಸಕರು ಸೂಚಿಸಿದ ಕೆಲಸವನ್ನ ಕಟ್ಟುನಿಟ್ಟಾಗಿ ಮಾಡಬೇಕು ಇಲ್ಲವಾದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಾಸಕ ಶ್ರೀನಿವಾಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.