ರಾಜ್ಯ ಸರ್ಕಾರ ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜಿಗೆ ನಿರ್ಮಾಣ ಮಾಡುತ್ತಿರುವುದನ್ನು ಖಂಡಿಸಿ, ಸೆಪ್ಟೆಂಬರ್ 9 ರಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರದಲ್ಲಿ ಶುಕ್ರವಾರ ಸಾಯಂಕಾಲ 5ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘಟನೆ ಮುಖಂಡ ಅರವಿಂದ ಕುಲಕರ್ಣಿ ಹೇಳಿದರು. ಸೆಪ್ಟೆಂಬರ್ 9ರಂದು ಸುಮಾರು 10ಸಾವಿರ ವಿದ್ಯಾರ್ಥಿಗಳೊಂದಿಗೆ ಬೃಹತ್ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ ಎಂದು ಹೇಳಿದರು.