ಮಂಡ್ಯದ ಮದ್ದೂರಿನಲ್ಲಿ ಗಣಪತಿ ಗಲಾಟೆ ಪ್ರಕರಣದ ಬೆನ್ನಲ್ಲೇ ಇದೀಗ ಕಾಫಿ ನಾಡು ಚಿಕ್ಕಮಗಳೂರಿನಲ್ಲಿಯೂ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಹಾಕಿದವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಶನಿವಾರ ಚಿಕ್ಕಮಗಳೂರು ನಗರದಲ್ಲಿ ನಡೆದಿದ್ದ ಹಿಂದೂ ಮಹಾ ಗಣಪತಿ ವಿಸರ್ಜನಾ ಬೃಹತ್ ಶೋಭಾ ಯಾತ್ರೆಯಲ್ಲಿ ಡಿಜೆ ಬಳಸಿ ಕೋರ್ಟ್ ಆದೇಶ ಉಲ್ಲಂಘನೆ ಮಾಡಲಾಗಿದೆ ಎಂದು ಕಾರಣ ನೀಡಿ ಡಿಜೆ ಮಾಲೀಕ ಮತ್ತು ಆಪರೇಟರ್ ವಿರುದ್ಧ ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.