ವೆರ್ಗಾ ಕಂಪನಿ ಮುಚ್ಚದಂತೆ ಸಿಪಿಐಎಂ ಪ್ರತಿಭಟನೆ ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಠಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿರುವುದನ್ನು ವಿರೋಧಿಸಿ, ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕೆಂದು ಸಿಪಿಐ(ಎಂ) ಪಕ್ಷದಿಂದ ನಗರದ ತಹಶೀಲ್ದಾರ್ ಕಛೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ಟಿ.ಎಂ ವೆಂಕಟೇಶ್ ಮಾತನಾಡಿ ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ ೮೧ ಖಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾ