ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಬೆಂಗಳೂರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಮತ್ತು ಕೊಪ್ಪಳ ಸಹಯೋಗದೊಂದಿಗೆ ಭಾನುವಾರ ಬೆಳಿಗ್ಗೆ 11ಗಂಟೆಗೆ ನಗರದ ತಾಳೂರು ರಸ್ತೆಯ ಜಿಲ್ಲಾ ನ್ಯಾಯಾಲಯ ಸಂಕೀರ್ಣದ 1ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ “ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಂಗ ಅಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಕ್ರಮ ನಡೆಯಿತು ಹೈಕೋರ್ಟ್ ನ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತ ನ್ಯಾಯಾಧೀಶರೂ ಆಗಿರುವ ನ್ಯಾಯಮೂರ್ತಿ ಆರ್. ನಟರಾಜ್ ಅವರು ವರ್ಚುವಲ್ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಈ ಕಾರ್ಯಗಾರವನ್ನು ಎಲ್ಲಾ ನ್ಯಾಯಾಧೀಶರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.