ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯ ನವದೆಹಲಿ, ಗೌರವಾನ್ವಿತ ಕರ್ನಾಟಕ ಉಚ್ಛ ನ್ಯಾಯಾಲಯ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ಆದೇಶದನ್ವಯ ಗದಗ ಜಿಲ್ಲೆಯಲ್ಲಿ ದಿ. 13-09-2025 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಂಡಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಅಧ್ಯಕ್ಷರಾದ ಗಂಗಾಧರ ಸಿ.ಎಮ್ ಅವರು ತಿಳಿಸಿದರು.