ಸಮಾಜದ ಕಟ್ಟಕಡೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರಿ ಶಾಲೆಗಳು ಬಹು ದೊಡ್ಡ ಕೊಡುಗೆ ನೀಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪ್ರತಿಯೊಬ್ಬ ವಿದ್ಯಾರ್ಥಿಗೂ ಉತ್ತಮ ಶಿಕ್ಷಣ ನೀಡಲು ಅಗತ್ಯ ಸೌಲಭ್ಯ ಒದಗಿಸಲು ಮುಂದಾಗಿದೆ’ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ದಾವಣಗೆರೆ ತಾಲೂಕಿನ ಈಚಘಟ್ಟ ಗ್ರಾಮದಲ್ಲಿ ಶುಕ್ರವಾರ ಸಂಜೆ 4 ಗಂಟೆಗೆ 19 ಲಕ್ಷ ರೂ. ವೆಚ್ಚದ ಸರ್ಕಾರಿ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.