ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ : ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೆಗೌಡ ತಿಳಿಸಿದ್ದಾರೆ ಕೋಲಾರ ನಮ್ಮ ಮತ ನಮ್ಮ ಹಕ್ಕು ನಮ್ಮ ಹೋರಾಟ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲಾ ಅಧ್ಯಕ್ಷ ಆಫ್ರಿದ್ ಹಾಗೂ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೆ ಗೌಡ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಈ ಸಂಬಂಧ ಸುನಿಲ್ ನಂಜೆ ಗೌಡ ಭಾನುವಾರ ರಾತ್ರಿ 8 ಗಂಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ನಮ್ಮಲ್ಲಿ ಯಾವುದೇ ಬಣ ರಾಜಕೀಯ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ