ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಡಿ.ಜೆ ಸಿಸ್ಟಂ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆವಿಗೂ ಡಿ.ಜೆ ಸೌಂಡ್ ಸಿಸ್ಟಂ, ಹೆಚ್ಚಿನ ಶಬ್ಧ ಹೊರ ಸೂಸುವ ಧ್ವನಿವರ್ಧಕಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.