ಗುಡಿಬಂಡೆ ಸಮೀಪದ ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ ಹೋಬಳಿಯ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಒಂಟೂರು ಗ್ರಾಮದಲ್ಲಿ ಸೂಕ್ತ ರಸ್ತೆ ಚರಂಡಿ ವ್ಯವಸ್ಥೆ ಇಲ್ಲದೆ ಗ್ರಾಮಸ್ಥರು ಪರದಾಡುವಂತಾಗಿದೆ.. ರಸ್ತೆಯ ಹಾಗೂ ಚರಂಡಿ ನಿರ್ಮಾಣ ಮಾಡದೇ ಇರುವುದರಿಂದ ಚರಂಡಿ ನೀರು ರಸ್ತೆಗೆ ತುಂಬಿಕೊಂಡಿದ್ದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಕೂಡಲೇ ಗ್ರಾಪಂನವರು ಚರಂಡಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.ಕಳೆದ ವರ್ಷ ನವೆಂಬರ್ 12 ರಂದು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ನಮ್ಮ ಊರು ನಮ್ಮ ಗ್ರಾಮ ಕಾರ್ಯಕ್ರಮ ಕ್ಕೆ ಒಂಟೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ