ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಮಳ್ಳೂರು ಗ್ರಾಮದಲ್ಲಿ ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನ ಪತಿ, ಕೊಲೆ ಮಾಡಿರುವ ಘಟನೆ ನಡೆದಿದೆ ಏನೋ ಮಳ್ಳೂರು ಗ್ರಾಮದ 38 ವರ್ಷದ ರಾಮಪ್ಪ ವಾಲೇರ್ ಎಂಬಾತ 35 ವರ್ಷದ ರತ್ನಮ್ಮ ವಿವಾಹವಾಗಿದ್ದರು ಕೌಟುಂಬಿಕ ಕಲಹದ ಹಿನ್ನೆಲೆ ರಾಮಪ್ಪ ತನ್ನ ಪತ್ನಿ ರತ್ನಮ್ಮ ಅವರನ್ನ ಕೊಲೆ ಮಾಡಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು ಶನಿವಾರ ಬೆಳಕಿಗೆ ಬಂದಿದೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.