ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ನಿಮಿತ್ಯ ಶಾಂತಿ ಸಭೆಯನ್ನು ಮಾಡಲಾಯಿತು ಈ ಶಾಂತಿ ಸಭೆಯ ನೇತೃತ್ವವನ್ನು ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟ ಮಾದಯ್ಯ ಹಾಗೂ ಡಿವೈಎಸ್ಪಿ ಬಿಎಸ್ ತಳವಾರ್ ಮಾತನಾಡಿ ಕಾನೂನಿನ ನಿಯಮಗಳ ಅಡಿಯಲ್ಲಿ ಹಬ್ಬಗಳನ್ನು ಆಚರಣೆ ಮಾಡಬೇಕು ಒಂದು ವೇಳೆ ಕಾನೂನಿನ ನಿಯಮಗಳನ್ನು ಪಾಲಿಸದೆ ಇದ್ದರೆ ನಿರ್ದಾಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ನೆರೆದ ಸಾರ್ವಜನಿಕರು ಹಾಗೂ ಎಲ್ಲಾ ಪಕ್ಷಗಳ ಮುಖಂಡರಿಗೆ ಮಾಹಿತಿಯನ್ನು ನೀಡಿದರು.